Karnataka SSLC Result 2020: ಈ ವಾರದೊಳಗೆ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಸಾಧ್ಯತೆ

ನಾಡು ಮಾಹಿತಿ

04-08-2020

ಮಂಗಳವಾರ

ಬೆಂಗಳೂರು (ಆ. 4): ಕೆಲವೇ ದಿನಗಳಲ್ಲಿ ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಒಮ್ಮೆ ಫಲಿತಾಂಶ ಪ್ರಕಟವಾದ ನಂತರ ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟವಾಗಲಿದೆ. ಬಹುತೇಕ ಆಗಸ್ಟ್​ 6 ಅಥವಾ 8ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಹೆಚ್ಚಾಗಿದೆ.

ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಘೋಷಿಸುವುದಾಗಿ ಜುಲೈ 20ರಂದು ಹೇಳಿದ್ದರು. ಕರ್ನಾಟಕದಲ್ಲಿ ಈ ವರ್ಷ ಸುಮಾರು 8.40 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಕಳೆದ ತಿಂಗಳು ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು. ಜುಲೈ 3ರಂದು ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದಿತ್ತು.

ಈಗಾಗಲೇ ಮೌಲ್ಯಮಾಪನ ಮುಕ್ತಾಯವಾಗಿದೆ. ಹೀಗಾಗಿ, ಈ ವಾರದಲ್ಲೇ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಹೆಚ್ಚಾಗಿದೆ. 

ಫಲಿತಾಂಶ ಪ್ರಕಟವಾದ ಬಳಿಕ ನಿಮ್ಮ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿದೆ ಸುಲಭ ವಿಧಾನ.

  • ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ karresults.nic.in ವೆಬ್​ಸೈಟ್​ಗೆ ಹೋಗಿ.
  • ಎಸ್​ಎಸ್​ಎಲ್​ಸಿ ರಿಸಲ್ಟ್​ 2020 ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಪರೀಕ್ಷೆಯ ರೋಲ್ ನಂಬರ್ ಮತ್ತು ಪೇಜ್​ನಲ್ಲಿ ಕೇಳುವ ಮಾಹಿತಿಯನ್ನು ಭರ್ತಿ ಮಾಡಿ.
  • ಹಾಲ್​ ಟಿಕೆಟ್​ನ ಮಾಹಿತಿಯನ್ನು ವೆಬ್​ಸೈಟ್​ನಲ್ಲಿ ವೇರಿಫೈ ಮಾಡಿಕೊಳ್ಳಿ.
  • ಆಗ ನಿಮ್ಮ ಪರೀಕ್ಷೆ ಫಲಿತಾಂಶ ಸಿಗುತ್ತದೆ.
  • ನಂತರ ಆ ಫಲಿತಾಂಶವನ್ನು ಪಿಡಿಎಫ್​ ಫಾರ್ಮಾಟ್​ನಲ್ಲಿಯೇ ಡೌನ್​ಲೋಡ್ ಮಾಡಿಕೊಳ್ಳಿ. ಹಾಗೇ, ಒಂದು ಕಾಪಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಜೂನ್ 25ರಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. ಕೊರೋನಾ ಭೀತಿಯ ನಡುವೆಯೇ ಎಲ್ಲ ವಿಷಯಗಳ ಪರೀಕ್ಷೆಗಳನ್ನೂ ನಡೆಸಿದ್ದಕ್ಕೆ ವ್ಯಾಪಕ ವಿರೋಧ ಕೇಳಿಬಂದಿತ್ತು. ಕೊರೋನಾ ಹಿನ್ನೆಲೆ ಈ ಬಾರಿ ಶಾಲೆಗಳ ಬದಲು ಆನ್ಲೈನ್ನಲ್ಲಿ ನೇರವಾಗಿ ಫಲಿತಾಂಶ ಪ್ರಕಟಿಸಲಾಗುವುದು.

ನಾಡು ಮಾಹಿತಿ

Leave a comment